ಗುರುವಾರ , ಅಕ್ಟೋಬರ್ 24, 2019
21 °C

ಸ್ವಪಕ್ಷೀಯರ ವಿರುದ್ಧ ಯತ್ನಾಳ ವಾಗ್ದಾಳಿ

Published:
Updated:
ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ‘ಒಬ್ಬರು ಬೆಂಗಳೂರು, ಮತ್ತೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತುಕೊಂಡು ಏನು ಮಾಡುತ್ತಿದ್ದೀರಿ’ ಎಂದು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಹಾಗೂ ಪ್ರಹ್ಲಾದ ಜೋಶಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ‘ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ತೆರಳಿ ಪ್ರಧಾನಿ ಭೇಟಿಗೆ ಸಮಯ ನಿಗದಿ ಮಾಡಿ’ ಎಂದು ಒತ್ತಾಯಿಸಿದರು.

ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅನಂತಕುಮಾರ್ ಬದುಕಿದ್ದರೆ ರಾಜ್ಯದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸೇತುವೆಯಾಗಿದ್ದರು. ಆದರೆ, ಈಗಿನ ಸಂಸದರು ತಗ್ಗುಗಳಾಗಿದ್ದಾರೆ. ರಾಜ್ಯದಲ್ಲಿ ಮೂವರು ಕೇಂದ್ರ ಸಚಿವರು ಇದ್ದೀರಿ. ಒಬ್ಬರಾದರೂ ಸೇತುವೆಯಂತೆ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.

‘ಹುಬ್ಬಳ್ಳಿಯ ಜೋಡೆತ್ತುಗಳಾದ ಜಗದೀಶ ಶೆಟ್ಟರ್ ಮತ್ತು ಪ್ರಹ್ಲಾದ ಜೋಶಿ ಅವರು ಕೇಂದ್ರದಿಂದ ಪರಿಹಾರ ತರುವ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಲಿ. ಅವರು ರೈಲು ಎಂಜಿನ್‌ಗಳಾಗಿ ಮುಂದೆ ಹೋಗಲಿ, ನಾವು ಬೋಗಿಗಳಂತೆ ಅವರನ್ನು ಹಿಂಬಾಲಿಸುತ್ತೇವೆ’ ಎಂದರು.

‘ಅ.10ಕ್ಕೆ ಪ್ರತಿಭಟನೆ’

ತುಮಕೂರು: ‘ನೆರೆಗೆ ಪರಿಹಾರವಾಗಿ ಕೇಂದ್ರದಿಂದ ಒಂದು ರೂಪಾಯಿ ಬಂದಿಲ್ಲ. ಒತ್ತಡ ಹಾಕುವಲ್ಲಿ ರಾಜ್ಯವೂ ಸೋತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ವಿಧಾನಸಭೆ ಅಧಿವೇಶನದ ಮೊದಲ ದಿನ(ಅ.10) ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದು ಎಚ್‌.ಡಿ.ದೇವೇಗೌಡ ಜೆಡಿಎಸ್‌ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ತಿಳಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)