ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದಲ್ಲಿ ಕುಳಿತುಕೊಳ್ಳುವವರಿಗೆ ಸಚಿವ ಸ್ಥಾನ ಬೇಡ: ಯತ್ನಾಳ

Last Updated 28 ಜನವರಿ 2020, 9:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಂಪುಟ ವಿಸ್ತರಣೆ ನಿತ್ಯ ಪ್ರಹಸನವಾಗಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೂ ಮಾಧ್ಯಮಗಳಲ್ಲಿ ಇದೇ ವಿಷಯ ಕುರಿತು ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಬೇರೆ ಸಮಸ್ಯೆಗಳಿವೆ. ಅವುಗಳ ಬಗ್ಗೆಯೂ ಚರ್ಚೆಯಾಗಬೇಕಾದರೆ ವಿಸ್ತರಣೆ ಅಗತ್ಯವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು‌.

ಮಾಧ್ಯಮದವರ ಜೊತೆ ಮಾತನಾಡಿದ ಅವರು ಶುಕ್ರವಾರದೊಳಗೆ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಬೇಗನೆ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಸಂಪುಟ ವಿಸ್ತರಣೆ ವೇಳೆ ಕೆಲವರು ತ್ಯಾಗ ಮಾಡಲಿ ಎಂದರು.

ಕೇವಲ ವಿಧಾನಸೌಧದಲ್ಲಿ ಕುಳಿತುಕೊಳ್ಳುವವರಿಗೆ ಸಚಿವ ಸ್ಥಾನ ನೀಡಬಾರದು. ಗೂಟದ ಕಾರು ಬೇಕು ಎನ್ನುವವರಿಗೆ ಸಚಿವ ಸ್ಥಾನ ನೀಡಬಾರದು. ಕೆಲಸ ಮಾಡುವವರಿಗೆ ಸಚಿವ ಸ್ಥಾನ ನೀಡಲಿ ಎಂದರು.

ಪಕ್ಷಕ್ಕೆ ಬಂದವರಿಗೆ ಸಚಿವ ಸ್ಥಾನ ಹಂಚಿಕೆ ಮಾಡಲಿ. ಅವರು ಪಕ್ಷಕ್ಕೆ ಬಂದಿದ್ದಕ್ಕೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾನೇನೂ ಸಚಿವ ಸ್ಥಾನದ ಆಕ್ಷಾಂಕಿಯಲ್ಲ ಎಂದರು.

ಮಿಣಿ ಮಿಣಿ ಪೌಡರ್ ಬಗ್ಗೆ ಎಚ್‌ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಆ ಮಿಣಿ ಮಿಣಿ ಪೌಡರ್ ಎಲ್ಲಿತ್ತೋ ಎನೋನಾನಂತೂ ನೋಡಿಲ್ಲ. ಕುಮಾರಸ್ವಾಮಿಯವರೇ ಸೃಷ್ಟಿಸಿದ ಪೌಡರ್ ಇದು. ಬಿಜೆಪಿಯವರು ಮಾತನಾಡಿದ್ರೆ ವಿಕೃತಿ ಮನಸ್ಸು ಅಂತಾರೆ ಎಂದರು.

ಕುಮಾರಸ್ವಾಮಿ ಏನೇನುಮಾಡತಾರೆ ನಮಗೂ ಗೊತ್ತಿದೆ. ನಮಗೂ ಸಿಡಿ ಬಿಡುಗಡೆ ಮಾಡೋಕೆ ಬರುತ್ತೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT