ಶನಿವಾರ, ಅಕ್ಟೋಬರ್ 19, 2019
28 °C

ಕುಮಾರಸ್ವಾಮಿ ಸರ್ಟಿಫಿಕೇಟ್ ಬೇಕಿಲ್ಲ: ಬಸವರಾಜ ಬೊಮ್ಮಾಯಿ

Published:
Updated:

ಹಾವೇರಿ: ‘ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 14 ತಿಂಗಳು ಏನೂ ಮಾಡದೆ ಕಾಲ ಕಳೆದಿದ್ದಾರೆ. ಹೀಗಾಗಿ, ನಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ಅವರು ಸರ್ಟಿಫಿಕೇಟ್ ನೀಡುವುದು ಬೇಕಿಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಇಲ್ಲಿ ತಿರುಗೇಟು ನೀಡಿದರು.

‘ಕುಮಾರಸ್ವಾಮಿ ಅವರ ಟೀಕೆಗಳು ಅಪ್ರಸ್ತುತ’ ಎಂದೂ ಅವರು ಟೀಕಿಸಿದರು.

‘ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ನಮ್ಮ ಸರ್ಕಾರ ಕೈಬಿಟ್ಟಿಲ್ಲ. ಅದರ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಆ ವರದಿ ಬಂದ ನಂತರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿ ಆಗಿದ್ದರು. ಸಮ್ಮಿಶ್ರ ಸರ್ಕಾರವೂ ಅಧಿಕಾರದಲ್ಲಿತ್ತು. ಅವರು ಏಕೆ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಿಲ್ಲ’ ಎಂದೂ ಪ್ರಶ್ನಿಸಿದರು.

Post Comments (+)