ಶನಿವಾರ, ಫೆಬ್ರವರಿ 29, 2020
19 °C

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ: ತನಿಖೆಗೆ ಬಸವರಾಜ ಬೊಮ್ಮಾಯಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಆಟೊದಲ್ಲಿ ಬಂದು, ಬ್ಯಾಗ್ ಇಟ್ಟಿರೋದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿ ತಾಲೂಕಿನ ಗೊಟಗೋಡಿ ಬಳಿಯ ಜಾನಪದ ವಿಶ್ವ ವಿದ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಆಟೊದಲ್ಲಿ ಬಂದು, ಬ್ಯಾಗ್ ಇಟ್ಟಿರೋದು ಸಿಸಿಟಿವಿಯಲ್ಲಿ ಗುರುತಿಸಲಾಗಿದೆ. ಸಂಶಯಾಸ್ಪದವಾಗಿ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸಿಐಎಸ್ಎಫ್ ಪೊಲೀಸರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ‌. ಅದರಲ್ಲಿ ಸಜೀವ್ ಬಾಂಬ್ ಪತ್ತೆಯಾಗಿದೆ.

ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಮಂಗಳೂರನ್ನು ಭಯೋತ್ಪಾದನಾ ಚಟುವಟಿಕೆ ತಾಣ ಎಂದು ಗುರುತಿಸಲಾಗಿದೆ. ನಮ್ಮ ದೇಶದ ಆರ್ಥಿಕ ಚಟುವಟಿಕೆಗಳಿಗೆ ಭಂಗ ತರುವ ಕೃತ್ಯವಿದು. ಇದನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು.

ಗಣರಾಜೋತ್ಸವ ಬಂದಾಗ ದೇಶ ಹಾಗೂ ರಾಜ್ಯದಲ್ಲಿ ಈ ರೀತಿ ವಿಧ್ವಂಸಕ ಕೃತ್ಯಕ್ಕೆ ಭಯೋತ್ಪಾದಕರು ಪ್ರಯತ್ನ ನಡೆಸುತ್ತಲೆ ಬಂದಿದ್ದಾರೆ. ಅದನ್ನು ನಾವು ವಿಫಲ ಮಾಡುತ್ತ ಬಂದಿದ್ದೇವೆ ಎಂದರು.

ಅದಕ್ಕಾಗಿ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು