ಸಭಾಪತಿ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ: ಹೊರಟ್ಟಿ

7

ಸಭಾಪತಿ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ: ಹೊರಟ್ಟಿ

Published:
Updated:
ಹೊರಟ್ಟಿ

ಹುಬ್ಬಳ್ಳಿ: ‘ಸಭಾಪತಿ ಸ್ಥಾನಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಲ್ಲ. ಯೋಗ್ಯತೆಯಿದ್ದರೆ, ಮುಂದುವರಿಸಲಿ’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

‘ಸಚಿವನಾಗುವ ಆಸೆ ಉಳಿದಿಲ್ಲ. ಯಾವ ಹುದ್ದೆ ಕೊಟ್ಟರೂ ನಿಭಾಯಿಸುತ್ತೇನೆ. ಕೊಡದಿದ್ದರೆ, ಶಾಸಕನಾಗಿ ಮುಂದುವರಿಯುತ್ತೇನೆ. ಎಲ್ಲ ತೀರ್ಮಾನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಿಟ್ಟದ್ದು’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರ ಬಳಿ ಕೇಳುವುದಿಲ್ಲ. ಸ್ನೇಹ ಬೇರೆ, ರಾಜಕೀಯ ಬೇರೆ. ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆಯ ಮೇಲೆ ಅಧಿಕಾರ ನಡೆಸಬೇಕಾಗುತ್ತದೆ’ ಎಂದರು.

‘ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕುಮಾರಸ್ವಾಮಿ ಅವರು ಯಾವುದೇ ತಾರತಮ್ಯ ಮಾಡಿಲ್ಲ ಎಂದಿದ್ದಾರೆ. ಅವಶ್ಯವಿದ್ದರೆ, ಚರ್ಚೆಗೆ ಸಿದ್ಧ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಶಾಸಕರು ಸಭಾಪತಿ ಕೊಠಡಿಯಲ್ಲಿ ಸಭೆ ಮಾಡಿ, ಚರ್ಚಿಸಬಹುದು. ಸದನದಲ್ಲಿ ಪ್ರಸ್ತಾಪಿಸಿದರೆ, ಚರ್ಚೆಗೆ ಅವಕಾಶ ನೀಡುತ್ತೇನೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !