ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿ.ಎಂ.ಗೆ ಪತ್ರ

Last Updated 31 ಡಿಸೆಂಬರ್ 2019, 20:38 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬೆಂಗಳೂರಿನಲ್ಲಿ ಫೆ.17ರಿಂದ 21ರವರೆಗೆ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಬೇಕು’ ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

‘ಉತ್ತರ ಕರ್ನಾಟಕದಲ್ಲಿ ಗಡಿ ಸಮಸ್ಯೆ, ಮಹದಾಯಿ ವಿವಾದ, ಪ್ರವಾಹ ಪರಿಹಾರ ವಿಳಂಬ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸುವ ಸಲುವಾಗಿ, ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಬೇಕು. ಬಜೆಟ್‌ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಬಹುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT