ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲೆಮಾರಿ ಸಮುದಾಯದ ಅಪ್ರಾಪ್ತೆ ಮೇಲೆ ಅತ್ಯಾಚಾರ

Last Updated 19 ಜೂನ್ 2019, 10:15 IST
ಅಕ್ಷರ ಗಾತ್ರ

ಹಾಸನ: ಹೊಳೆನರಸೀಪುರ ತಾಲ್ಲೂಕಿನಲ್ಲಿ ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಜೂನ್ 16ರ ರಾತ್ರಿ ಚಾಲಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿರುವ ಬಾಲಕಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಚಾಲಕ ರವಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿಳ್ಳೆಕ್ಯಾತ ಸಮುದಾಯದ 16 ವರ್ಷದ ಬಾಲಕಿ, ಇತ್ತೀಚೆಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಳು. ಸದ್ಯ ಎಸ್ಸೆಸ್ಸೆಲ್ಸಿ ಮುಗಿಸಿ, ತನ್ನ ಅಜ್ಜಿಯ ಮನೆ ಉಳಿದುಕೊಂಡು ವಿದ್ಯಾಭ್ಯಾಸ ಮುಂದುವರಿಸಿದ್ದಳು.

ಪಕ್ಕದ ಗ್ರಾಮದ ಆಟೋ ಚಾಲಕ ಮತ್ತು ತರಕಾರಿ ವ್ಯಾಪಾರ ಮಾಡುತ್ತಿದ್ದ ರವಿ ಬಾಲಕಿಗೆ ಪರಿಚಯವಿದ್ದ. ವರ್ಷದ ಹಿಂದೆಯೇ ಶಾಲೆ ಬಳಿಗೆ ಬಂದು ಬಾಲಕಿಯನ್ನು ಪುಸಲಾಯಿಸಿ, 'ಖರ್ಚಿಗೆ ಹಣ ಕೊಡುತ್ತೇನೆ. ನಾನು ಹೇಳಿದಂತೆ ಕೇಳು’ ಎಂದು ಹೇಳಿದ್ದ. ಆದರೆ, ಇದಕ್ಕೆ ಬಾಲಕಿ ನಿರಾಕರಿಸಿದ್ದಳು.

ಅಂದು ರಾತ್ರಿ ಬಾಲಕಿ ಮನೆಗೆ ನುಗ್ಗಿ, ಆಕೆ ಕೂಗಿಕೊಳ್ಳದಂತೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಆದರೂ ಬಾಲಕಿ ಕೂಗಿಕೊಳ್ಳುವುದನ್ನು ಕೇಳಿಸಿಕೊಂಡ ಸಂಬಂಧಿಕರು ಬಂದು ನೋಡುವಷ್ಟರಲ್ಲಿ ಅಲ್ಲಿಂದ ಪರಾರಿಯಾಗಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT