ಸೋಮವಾರ, ಏಪ್ರಿಲ್ 6, 2020
19 °C

ಕೋವಿಡ್-19 ಭೀತಿ: ಬಿಬಿಎಂಪಿ ವ್ಯಾಪ್ತಿಯ ಸೂಪರ್ ಮಾರ್ಕೆಟ್ ಬಂದ್ ಮಾಡಲು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ನಗರದಲ್ಲಿನ ಎಲ್ಲಾ ಸೂಪರ್ ಮಾರ್ಕೆಟ್‌ಗಳನ್ನು (ಹವಾನಿಯಂತ್ರಿತ) ಬಂದ್ ಮಾಡಲಾಗುವುದು ಎಂದು ಪಾಲಿಕೆ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ತಿಳಿಸಿದರು.

ಈ ಆದೇಶ ಈ ಕ್ಷಣದಿಂದಲೇ ಜಾರಿಗೆ ಬರಲಿದೆ. ಪಾಲಿಕೆ ಆದೇಶ ಉಲ್ಲಂಘಿಸಿದರೆ ಕೆಎಂಸಿ ಕಾಯ್ದೆಯಡಿ ಇರುವ ಅಧಿಕಾರ ಬಳಸಿಕೊಂಡು ಪರವಾನಗಿ ರದ್ದುಗೊಳಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನೂರಕ್ಕಿಂತ ಹೆಚ್ಚು ಜನ ಸೇರುವ ಮದುವೆ ಆರತಕ್ಷತೆಗಳನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು.

ಶಾಲಾ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು, ತರಬೇತಿ ಕಾರ್ಯಕ್ರಮಗಳನ್ನೂ ರದ್ದು ಮಾಡಲು ತಿಳಿಸಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು