ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷೆ ನಿಗದಿ ಕೋರಿಕೆ: ನೋಟಿಸ್‌

Last Updated 14 ಜನವರಿ 2020, 20:17 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಕಾರಣರಾಗುವ ಅಧಿಕಾರಿಗಳಿಗೆ ಕರ್ನಾಟಕ ನಗರ ಹಾಗೂ ಗ್ರಾಮಾಂತರ ಯೋಜನಾ ಕಾಯ್ದೆ-1961ರ ಕಲಂ 76ಎ ಅನ್ವಯ ಶಿಕ್ಷೆ ಪ್ರಮಾಣ ನಿಗದಿಪಡಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಈ ಸಂಬಂಧ ವಿವರಣೆ ನೀಡುವಂತೆ ಸೂಚಿಸಿದೆ.

‘ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯ ಸ್ವರೂಪ ನಿಗದಿಪಡಿಸಿಲ್ಲ. ಈ ಬಗ್ಗೆ 2019ರ ನವೆಂಬರ್ 2ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಂಡಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT