ಶುಕ್ರವಾರ, ಫೆಬ್ರವರಿ 28, 2020
19 °C

ಪ್ರಮಾಣ ವಚನ ಸ್ವೀಕಾರಕ್ಕೆ ಸಿಎಂ ಬಿಎಸ್‌ವೈಯಿಂದ ಕರೆ ಬಂದಿದೆ: ಬಿ.ಸಿ ಪಾಟೀಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಗುರುವಾರ ರಾಜಭವನಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಶಾಸಕ ಬಿ.ಸಿ ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ. 

ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಬುಧವಾರ ಸಂಜೆ 4.34 ಗಂಟೆಗೆ ಮಧುರ ಕ್ಷಣದಲ್ಲಿ ಕರೆ ಮಾಡಿದ ಬಿಎಸ್‌ ಯಡಿಯೂರಪ್ಪ ಅವರು ಬೆಳಿಗ್ಗೆ 10.30 ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಬೇಕೆಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 10.30 ಕ್ಕೆ ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವನಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. 

ಗುರುವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಯಾರ್ಯಾರು ಸಚಿವರಾಗಲಿದ್ದಾರೆ ಎಂಬುದು ಈ ವರೆಗೆ ಖಚಿತವಾಗಿಲ್ಲ. ಈ ನಡುವೇ ಬಿ.ಸಿ ಪಾಟೀಲ್‌ ಟ್ವೀಟ್‌ ಮಾಡಿ ತಮಗೆ ಸ್ಥಾನ ದೊರಕಿರುವುದನ್ನು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು