ನಾನು ಬಿಜೆಪಿಗೆ ಹೋಗುತ್ತಿದ್ದೇನೆ ಎಂಬುದು ಸುಳ್ಳು: ಬಿ.ಸಿ.ಪಾಟೀಲ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿದ್ದ ಬಿ.ಸಿ ಪಾಟೀಲ ಅವರು ಸಿದ್ದರಾಮಯ್ಯ ಅವರನ್ನು ದಿಢೀರ್ ಭೇಟಿ ಮಾಡಿದರು.
ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬೆಳಗ್ಗಿನ ಜಾವ ಭೇಟಿಯಾದ ಬಿ.ಸಿ.ಪಾಟೀಲ, ನಾನು ಬಿಜೆಪಿಗೆ ಹೋಗುತ್ತಿದ್ದೇನೆ ಎಂಬುದು ಸುಳ್ಳು. ಕಾಂಗ್ರೆಸ್ ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ನಾನು ಮುಂಬೈನಲ್ಲಿ ರಮೇಶ್ ಜಾರಕಿಹೊಳಿ ಟೀಂ ಜೊತೆ ಇದ್ದೇನೆ ಎಂಬುದೆಲ್ಲ ಸುಳ್ಳು ಎಂದು ಮನವರಿಕೆ ಮಾಡಿಕೊಟ್ಟರು.
ದೆಹಲಿಗೆ ತೆರಳುವ ಮುನ್ನ ತಮ್ಮನ್ನು ಭೇಟಿ ಮಾಡಿದ ಪಾಟೀಲ ಅವರಿಗೆ ‘ಯಾವ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಬಲಿಯಾಗಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ’ ಎಂದು ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ ಎಂದು ಗೊತ್ತಾಗಿದೆ.
ಸಂಬಂಧಪಟ್ಟ ಸುದ್ದಿಗಳು
ಆಪರೇಷನ್ ಕಮಲ: ಸರ್ಕಾರ ಉರುಳಿಸಲು ಮೋದಿ, ಶಾ, ಬಿಎಸ್ವೈ ತಂತ್ರ: ಕಾಂಗ್ರೆಸ್ ಆರೋಪ
ಯಡಿಯೂರಪ್ಪನವರೇ ಇದು ನಿಮಗೆ ಕಟ್ಟ ಕಡೆಯ ಎಚ್ಚರಿಕೆ: ನಿರಂಜನಾನಂದಪುರಿ ಸ್ವಾಮೀಜಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.