ಕೆಎಸ್‌ಎಸ್‌ಐಡಿಸಿ, ಕೆಐಎಡಿಬಿ ಅಧಿಕಾರಿಗಳನ್ನು ನೇಣಿಗೇರಿಸಬೇಕು

7
ಸಣ್ಣ ಕೈಗಾರಿಕೆ ಸಚಿವ ಶ್ರೀನಿವಾಸ್‌ ಆಕ್ರೋಶ

ಕೆಎಸ್‌ಎಸ್‌ಐಡಿಸಿ, ಕೆಐಎಡಿಬಿ ಅಧಿಕಾರಿಗಳನ್ನು ನೇಣಿಗೇರಿಸಬೇಕು

Published:
Updated:
Deccan Herald

ದಾವಣಗೆರೆ: ‘ಭೂಮಿ ಅಭಿವೃದ್ಧಿ ಹೆಸರಿನಲ್ಲಿ ನಿವೇಶನಗಳ ಬೆಲೆಯನ್ನು ಮಾರುಕಟ್ಟೆ ಬೆಲೆಗಿಂತಲೂ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (ಕೆ.ಎಸ್‌.ಎಸ್‌.ಐ.ಡಿ.ಸಿ) ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆ.ಐ.ಎ.ಡಿ.ಬಿ) ಅಧಿಕಾರಿಗಳನ್ನು ಒಂದು ಕಡೆಯಿಂದ ನೇಣಿಗೇರಿಸುತ್ತ ಬರಬೇಕು’ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್‌.ಆರ್‌. ಶ್ರೀನಿವಾಸ್‌ (ವಾಸು) ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರದಿಂದ ಜಾಗ ಪಡೆದು ನಿವೇಶನಗಳನ್ನು ಅಭಿವೃದ್ಧಿಗೊಳಿಸಿ ಕೆ.ಎಸ್‌.ಎಸ್‌.ಐ.ಡಿಸಿ ಹಾಗೂ ಕೆ.ಐ.ಎ.ಡಿ.ಬಿ ₹ 1 ಕೋಟಿಯಿಂದ ₹ 2 ಕೋಟಿವರೆಗೆ ಬೆಲೆ ನಿಗದಿಗೊಳಿಸುತ್ತಿದೆ. ಆದರೆ, ಅದರ ಪಕ್ಕದಲ್ಲೇ ಇರುವ ಖಾಸಗಿಯವರ ಜಾಗ ₹ 10 ಲಕ್ಷಕ್ಕೆ ಸಿಗುತ್ತದೆ. ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಾಗ ಭೂಮಿ ಅಭಿವೃದ್ಧಿ ಹೆಸರಿನಲ್ಲಿ ನಿವೇಶನಗಳ ದರವನ್ನು ಹೆಚ್ಚಿಸಿರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ನಿವೇಶನ ಖರೀದಿಸಿ ಸಣ್ಣ ಕೈಗಾರಿಕೆ ಆರಂಭಿಸಲು ಉದ್ಯಮಿಗಳು ಮುಂದೆ ಬರುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಖುದ್ದು ಕೆಲವು ಕೈಗಾರಿಕಾ ಪ್ರದೇಶಗಳಿಗೆ ತೆರಳಿ ಪರಿಶೀಲಿಸುತ್ತಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ನಿವೇಶನದ ದರವನ್ನು ಹೆಚ್ಚಿಸುವಂತೆ ವರದಿ ಕೊಟ್ಟಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಅನಗತ್ಯವಾಗಿ ಒಂದು ಅಡಿಯಷ್ಟು ದಪ್ಪದ ಕಾಂಕ್ರೀಟ್‌ ರಸ್ತೆ, ಚರಂಡಿ ಮಾಡಲಾಗುತ್ತಿದೆ. ಇದರಿಂದಾಗಿ ಸರ್ಕಾರಕ್ಕೆ ₹ 500 ಕೋಟಿಗೂ ಹೆಚ್ಚು ನಷ್ಟವಾಗಿರಬಹುದು. ಭೂಮಿ ಅಭಿವೃದ್ಧಿ ವೆಚ್ಚವನ್ನು ಕಡಿಮೆಗೊಳಿಸಿ ಸಣ್ಣ ಕೈಗಾರಿಕೆ ಆರಂಭಿಸುವವರಿಗೆ ನಿವೇಶನ ಖರೀದಿಸಲು ಅನುಕೂಲವಾಗುವಂತೆ ಮಾಡಬೇಕು’ ಎಂದು ಸಚಿವರು ಸೂಚಿಸಿದರು.

‘ಕೆಲವೆಡೆ 20 ವರ್ಷಗಳಿಂದ ಸಣ್ಣ ಕೈಗಾರಿಕೆಗಳಿಗೆ ನಿವೇಶನದ ಸೇಲ್‌ ಡೀಡ್‌ ಮಾಡಿಕೊಟ್ಟಿಲ್ಲ. ಜಿಲ್ಲಾಧಿಕಾರಿಗಳು ಏಕ ಗವಾಕ್ಷಿ ಸಭೆಯ ಮೂಲಕ ಆದ್ಯತೆ ಮೇಲೆ ಸೇಲ್‌ ಡೀಡ್‌ ಮಾಡಿಕೊಡಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !