ಬೆಳಗಾವಿ ಎರಡನೇ ರಾಜಧಾನಿ: ಕೋನರೆಡ್ಡಿ ಬೆಂಬಲ

7

ಬೆಳಗಾವಿ ಎರಡನೇ ರಾಜಧಾನಿ: ಕೋನರೆಡ್ಡಿ ಬೆಂಬಲ

Published:
Updated:
Deccan Herald

ಬೆಂಗಳೂರು: ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಮಾಡಬೇಕೆಂಬ ಮುಖ್ಯಮಂತ್ರಿಯವರ ನಿಲುವನ್ನು ಬೆಂಬಲಿಸುವುದಾಗಿ ಜೆಡಿಎಸ್‌ ನಾಯಕ ಎನ್‌.ಎಚ್‌.ಕೋನರಡ್ಡಿ ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈ ಸಂಬಂಧ ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣವಾಗಲು ಕುಮಾರಸ್ವಾಮಿಯೇ ಕಾರಣರು ಎಂದು ಅವರು  ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು.

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ವಿಷಯದ ಬಗ್ಗೆ ಬಿಜೆಪಿ ತನ್ನ ಸ್ಪಷ್ಟ ನಿಲುವು ತಿಳಿಸಬೇಕು. ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕತೆಯ ಹೋರಾಟಕ್ಕೆ ಬಿಜೆಪಿಯೇ ಕಾರಣವಾಗಿದೆ. ರಾಜ್ಯವನ್ನು ಒಡೆಯುವ ಕೆಲಸಕ್ಕೆ ಬಿಜೆಪಿ ನಾಯಕರು ಕೈ ಹಾಕಿದ್ದಾರೆ ಎಂದು ಅವರು ಟೀಕಿಸಿದರು. 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !