ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಮೂವರ ವರದಿ ಬಾಕಿ

Last Updated 31 ಮಾರ್ಚ್ 2020, 14:58 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊರೊನಾ ವೈರಾಣು ಸೋಂಕು ದೃಢಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಮೂವರ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಈವರೆಗೆ 396 ಮಂದಿ ವಿದೇಶ ಹಾಗೂ ಹೊರಗಿನಿಂದ ಜಿಲ್ಲೆಗೆ ಬಂದವರ ಮೇಲೆ ನಿಗಾ ವಹಿಸಲಾಗಿದೆ. ಈ ಪೈಕಿ 229 ಮಂದಿಗೆ ಮನೆಗಳಲ್ಲಿ ಐಸೊಲೇಷನ್‌ ವ್ಯವಸ್ಥೆಯಲ್ಲಿರುವಂತೆ ಸೂಚಿಸಲಾಗಿದೆ. ಮೂವರು ಆಸ್ಪತ್ರೆಯಲ್ಲಿದ್ದಾರೆ. 131 ಮಂದಿ 14 ದಿನಗಳ ಹಾಗೂ 33 ಮಂದಿ 28 ದಿನಗಳ ನಿಗಾ ವ್ಯವಸ್ಥೆ ಪೂರೈಸಿದ್ದಾರೆ. 21 ಮಂದಿಯ ಗಂಟಲು ದ್ರವದ ಮಾದರಿಗಳನ್ನು ರವಾನಿಸಲಾಗಿದೆ. ಈವರೆಗೆ 18 ವರದಿಗಳು ‘ನೆಗೆಟಿವ್’ ಎಂದು ಬಂದಿವೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT