ಭಾನುವಾರ, ಜುಲೈ 25, 2021
25 °C

ಹುಬ್ಬಳ್ಳಿಗೆ ಪ್ರಯಾಣಿಸಿದ ವ್ಯಕ್ತಿಗೆ ಕರೊನಾ ಸೋಂಕು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಮತ್ತೊಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 302ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಶುಕ್ರವಾರ ಬಿಡುಗಡೆ ಮಾಡಿರುವ ಮಾಹಿತಿ ‍ಪ್ರಕಾರ, ರೋಗಿ ಸಂಖ್ಯೆ 7945 ಆಗಿರುವ 42 ವರ್ಷದ ವ್ಯಕ್ತಿಯು ನೆರೆಯ ಧಾರವಾಡ ಜಿಲ್ಲೆಯ ಹುಬ್ಬಳ್ಳಿಗೆ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದಾರೆ. ಈವರೆಗೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದಿಂದ ಬಂದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ವರದಿಯಾಗಿತ್ತು. ಅಂತರ ಜಿಲ್ಲಾ ಪ್ರಯಾಣದ ಹಿನ್ನೆಲೆಯವರಲ್ಲಿ ಸೋಂಕು ದೃಢವಾಗಿರುವುದು ಜಿಲ್ಲೆಯಲ್ಲಿ ಇದೇ ಮೊದಲು.

‘ಸೋಂಕಿತರು ಮೂಲತಃ ಧಾರವಾಡದವವರು. ಅವರನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್. ತುಕ್ಕಾರ ತಿಳಿಸಿದರು.

ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ 10 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಮ್ಸ್‌ ಆಸ್ಪತ್ರೆಯಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು. ಹುಕ್ಕೇರಿಯ 6, ನಿಪ್ಪಾಣಿಯ ಮೂವರು ಹಾಗೂ ಒಬ್ಬರು ಬಾಗಲಕೋಟೆಯವರು. ಇದರೊಂದಿಗೆ, ಈವರೆಗೆ 281 ಮಂದಿ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಇಳಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು