ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಕ್ಕೆ ನಕಲಿ ನಂಬರ್‌ ಪ್ಲೇಟ್‌ ಬಳಕೆ: ಸಿಐಡಿ ಪತ್ತೆ

ಭೀಮಾ ತೀರದ ರೌಡಿ ಗಂಗಾಧರ ಚಡಚಣ ಹತ್ಯೆ ಪ್ರಕರಣ
Last Updated 4 ಜುಲೈ 2018, 19:37 IST
ಅಕ್ಷರ ಗಾತ್ರ

ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಹತ್ಯೆಯಲ್ಲಿ ಬಳಸಲಾಗಿದೆ ಎನ್ನಲಾದ ಸ್ಕಾರ್ಪಿಯೋ ಜೀಪ್‌ ಅನ್ನು, ಸಿಐಡಿ ಪೊಲೀಸರು ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ಕೇಗಾಂವ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಜೀಪಿನ ನಂಬರ್‌ ಪ್ಲೇಟ್‌ ಅನ್ನು ಉದ್ದೇಶಪೂರ್ವಕವಾಗಿ ಬದಲಾಯಿಸಿ, ಬೇರೊಂದು ವಾಹನದ ನಂಬರ್ ಪ್ಲೇಟ್‌ ಬಳಸಿದ್ದರು. ಈ ನಂಬರ್‌ ಸೊಲ್ಲಾಪುರದ ಆರಾಧ್ಯ ಎಂಬುವವರಿಗೆ ಸೇರಿದ್ದು ಎಂಬುದು ತನಿಖೆಯಿಂದ ಪತ್ತೆಯಾಗಿದೆ.

ಈ ವಾಹನವನ್ನು, ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಭೈರಗೊಂಡನ ಅಳಿಯ ಸಿದ್ಧಗೊಂಡಪ್ಪ ಮುಡವೆ ಬಳಸುತ್ತಿದ್ದುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಮುಡವೆ ಸಹ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT