ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕೋವಿಡ್–19 ದೃಢಪಟ್ಟ ಪಾಲಿಕೆ ಸದಸ್ಯ ಆಸ್ಪತ್ರೆಗೆ ಸ್ಥಳಾಂತರ

Last Updated 30 ಮೇ 2020, 9:51 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್–19 ದೃಢಪಟ್ಟಿರುವ ಪಾಲಿಕೆ ಸದಸ್ಯರನ್ನು ಕೊನೆಗೂ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಕ್ವಾರಂಟೈನ್‌ಗೆ ಕಳುಹಿಸಲಾಗುತ್ತಿದೆ.

ಶುಕ್ರವಾರ ರಾತ್ರಿ ಅವರಿಗೆ ಸೋಂಕು ದೃಢಪಟ್ಟಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ಅವರ ಮನವೊಲಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮನೆಯಿಂದ ಹೊರಗೆ ಬಂದು ಜನರ ಕಡೆಗೆ ಕೈ ಬೀಸಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಹೊರಟರು.

ಅವರಿಗೆ ನಾಲ್ಕೈದು ದಿನಗಳಿಂದ ನೆಗಡಿ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇತ್ತು. ವೈದ್ಯರ ಬಳಿ ಅವರು ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಹೀಗಾಗಿ ಅವರ ಸಂಪರ್ಕದಲ್ಲಿ ಇದ್ದವರಿಗೆ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅವರ ಮನೆ ಹಾಗೂ ಸುತ್ತಮುತ್ತಲ ಪ್ರದೇಶಕ್ಕೆ ಸೋಂಕು ನಿವಾರಕ ಸಿಂಪರಣೆ ಮಾಡಲಾಗಿದೆ. ಅವರ ಸಂಪರ್ಕಿತರನ್ನು ಕ್ವಾರಂಟೈನ್‌ಗೆ ಕಳುಹಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT