ಸೋಮವಾರ, ನವೆಂಬರ್ 18, 2019
25 °C

ಕರವೇ ರಾಜ್ಯಾಧ್ಯಕ್ಷ ಸೇರಿ 10 ಕಾರ್ಯಕರ್ತರು ಪೊಲೀಸರಿಗೆ ಶರಣು

Published:
Updated:
Prajavani

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಅಶ್ವಿನಿ ಗೌಡ ಸೇರಿದಂತೆ 10 ಕರವೇ ಕಾರ್ಯಕರ್ತರು ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಮುಂದೆ ಕಾರ್ಯಕರ್ತರು ಶರಣಾಗಿದ್ದು, ಪೊಲೀಸ್ ವಾಹನದಲ್ಲೇ ವಿವಿ ಪುರಂ ಪೊಲೀಸ್ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ.

ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾದ ಬೆನ್ನಲ್ಲೇ ವೈದ್ಯ ಪದಾಧಿಕಾರಿಗಳ ಸಭೆ ಆರಂಭವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜಿನ‌ ಡೀನ್, ಅಸೋಸಿಯೇಷನ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಪ್ರತಿಕ್ರಿಯಿಸಿ (+)