ಶುಕ್ರವಾರ, ಆಗಸ್ಟ್ 12, 2022
20 °C

ಬಿಬಿಎಂಪಿ, ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ: ಮಹಿಳಾ ರೌಡಿ ಸೇರಿ 54 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಾದರಾಯನಪುರದ ಗುಡ್ಡದಹಳ್ಳಿಯಲ್ಲಿ ಭಾನುವಾರ ರಾತ್ರಿ ಬಿಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಮಹಿಳಾ ರೌಡಿ ಸೇರಿ 54 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋವಿಡ್-19 ಸೋಂಕಿತರ ಜೊತೆ ದ್ವಿತೀಯ ಸಂಪರ್ಕದಲ್ಲಿದ್ದ ಸೋಂಕು ಶಂಕಿತರನ್ನು ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದರು.

ಕ್ವಾರಂಟೈನ್‌ಗೆ ಒಪ್ಪದ ಶಂಕಿತರು ಹಾಗೂ ಅವರ ಕಡೆಯವರು, ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದರು. ರಸ್ತೆಗೆ ಅಡ್ಡವಾಗಿ ಹಾಕಿದ್ದ ತಗಡು, ಬ್ಯಾರಿಕೇಡ್ ಕಿತ್ತು ಹಾಕಿದ್ದರು. ಸ್ಥಳದಲ್ಲಿದ್ದ ಪೆಂಡಾಲ್ ಧ್ವಂಸ ಮಾಡಿದ್ದರು.

ರಾತ್ರಿಯೇ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಘಟನೆ ಸಂಬಂಧ ಜಗಜೀವನರಾಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

'ಘಟನೆ ಸಂಬಂಧ ರೌಡಿಶೀಟರ್ ಫಿರೋಜಾ ಎಂಬ ಮಹಿಳೆ ಸೇರಿ 54 ಮಂದಿಯನ್ನು ಬಂಧಿಸಲಾಗಿದೆ. ಫಿರೋಜಾ, ಸ್ಥಳೀಯವಾಗಿ ಗಾಂಜಾ ಮಾರುತ್ತಿದ್ದಳು. ಆಕೆಯೇ ಸಂಚು ರೂಪಿಸಿ ಗಲಾಟೆ ಮಾಡಿಸಿದ್ದಾಳೆ.  ಬಂಧಿತ ಆರೋಪಿಗಳ ಮೇಲೆ ಈ ಹಿಂದೆಯೇ ಹಲವು ಪ್ರಕರಣಗಳು ದಾಖಲಾಗಿವೆ. ಅವರೆಲ್ಲ ಅಪರಾಧ ಹಿನ್ನೆಲೆಯುಳ್ಳವರು. ಗಲಾಟೆ ವೇಳೆ ಬಹುತೇಕರು ಗಾಂಜಾ ಸೇವಿಸಿದ್ದರು ಎಂಬ ಅನುಮಾನವಿದೆ' ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದ್ರ ಮುಖರ್ಜಿ ಹೇಳಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸೋಮವಾರ ಪಾದರಾಯನಪುರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು