ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರ ಪ್ರಕರಣ: ಕಠಿಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ನಿರ್ದೇಶಿಸುವಂತೆ ಮನವಿ

Last Updated 20 ಏಪ್ರಿಲ್ 2020, 16:28 IST
ಅಕ್ಷರ ಗಾತ್ರ

ಬೆಂಗಳೂರು: ‘ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಸರ್ಕಾರದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಿದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ತೊಂದರೆ ತಾಪತ್ರಯಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ಈ ಮನವಿ ಮಾಡಲಾಗಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಈ ಮಧ್ಯಂತರ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ದಾಂದಲೆ ನಡೆಸಿದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ - 2005ರ ಕಲಂ 51 ಮತ್ತು 52ರಡಿ ಹಾಗೂ ರಾಷ್ಟ್ರೀಯ ಭದ್ರತಾ ಕಾಯ್ದೆ-1980ರ ಅಡಿಯಲ್ಲಿ ದೂರು ದಾಖಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮನವಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT