ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಜಿಲ್ಲೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ರಮೇಶ್ ಜಾರಕಿಹೊಳಿ

Last Updated 20 ಮೇ 2020, 8:02 IST
ಅಕ್ಷರ ಗಾತ್ರ

ಬೆಂಗಳೂರು: ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರಕ್ಕೆ ಪಂಪ್‌ ಮಾಡಿರುವ ನೀರನ್ನು ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ 12 ಕೆರೆಗಳಿಗೆ ನೀರು ತುಂಬಿಸಲು ಉದ್ದೇಶಿಸಿದ್ದು, ಇದಕ್ಕಾಗಿ 0.868 ಟಿಎಂಸಿ ಅಡಿ ನೀರು ಬಳಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೆರೆಗಳಿಗೆ ಗುರುತ್ವಾಕರ್ಷಣೆ ಮೂಲಕ ನೀರನ್ನು ಹರಿಸಲಾಗುವುದು ಎಂದರು.

ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗಳು ನಿರ್ಮಾಣ ಹಂತದಲ್ಲಿರುವುದರಿಂದ ಪ್ರಾಯೋಗಿಕವಾಗಿ ಭದ್ರಾ ಜಲಾಶಯದಿಂದ ನೀರನ್ನು ಪಂಪ್‌ ಮಾಡಿ ವಾಣಿವಿಲಾಸ ಸಾಗರದಲ್ಲಿ ಸಂಗ್ರಹ ಮಾಡಲಾಗಿದೆ ಎಂದೂ ಅವರು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಶಾಖಾ ಕಾಲುವೆಯ ಕಿ.ಮೀ 60 ರವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಚ್ಚುಕಟ್ಟು ಪ್ರದೇಶದ 48 ಕೆರೆಗಳಿಗೆ ಮತ್ತು ತರೀಕೆರೆ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ 79 ಕೆರೆಗಳಿಗೆ ನೀರು ಪೂರೈಸಲಾಗುವುದು. ಇದರಿಂದ 50,000 ಎಕರೆಯಷ್ಟು ಭೂಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಜಾರಕಿಹೊಳಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT