ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗವಾನ್ ವಿಚಾರಣೆ: ಬಂಧನ ಸಾಧ್ಯತೆ

Last Updated 31 ಡಿಸೆಂಬರ್ 2018, 18:03 IST
ಅಕ್ಷರ ಗಾತ್ರ

ಮೈಸೂರು: ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ಬಂಧನ ಭೀತಿ ಎದುರಾಗಿದೆ.

ಇವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಹಾಗೂ ಅವಹೇಳನ ಮಾಡಿರುವ ಕುರಿತು ಐಪಿಸಿ ಸೆಕ್ಷನ್ 295(ಎ) ಅಡಿ ಪ್ರಕರಣ ದಾಖಲಾಗಿದೆ. ಹಿರಿಯ ಅಧಿಕಾರಿಗಳು ಸೂಚಿಸಿದರೆ ಕೂಡಲೇ ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಒಂದು ಬಾರಿ ಭಗವಾನ್ ಅವರನ್ನು ವಿಚಾರಣೆ‌ಗೆ ಒಳಪಡಿಸಲಾಗಿದೆ. ಮುಂದೆ ಕೈಗೊಳ್ಳಬೇಕಿರುವ ಕ್ರಮದ ಕುರಿತು ಕಾನೂನು ತಜ್ಞರ ಸಲಹೆ ಕೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಗವಾನ್ ಅವರು ಈಚೆಗೆ ಪ್ರಕಟಿಸಿದ ‘ರಾಮ ಮಂದಿರ ಏಕೆ ಬೇಡ?’ ಎಂಬ ತಮ್ಮ ಪುಸ್ತಕದಲ್ಲಿ ‘ರಾಮ ಮದ್ಯಪಾನ ಮಾಡುತ್ತಿದ್ದ, ಮಾಂಸ ತಿನ್ನುತ್ತಿದ್ದ’ ಎಂದು ಬರೆದಿದ್ದರು. ಈ ಬರಹವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಹಾಗೂ ಅವಹೇಳನ ಮಾಡಿದೆ ಎಂದು ಹಿಂದೂ ಜಾಗರಣಾ ವೇದಿಕೆ ಜಗದೀಶ್ ಹೆಬ್ಬಾಳ್ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT