ಶುಕ್ರವಾರ, ಆಗಸ್ಟ್ 12, 2022
23 °C

ಭಾಸ್ಕರ ಶೆಟ್ಟಿ ಕೊಲೆ: ಜಾಮೀನು ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್‌ ಜಾಮೀನಿಗಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಪ್ರಕರಣದ 36 ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ನಂತರ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್‌.ಎ. ಬೋಬಡೆ ನೇತೃತ್ವದ ಪೀಠ ತಿಳಿಸಿತು.

ಪ್ರಮುಖ ಆರೋಪಿ, ಹತ್ಯೆಗೀಡಾಗಿರುವ ಭಾಸ್ಕರ್‌ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಳೆದ ಏಪ್ರಿಲ್‌ 23ರಂದು ವಜಾಗೊಳಿಸಿದ್ದ ಪೀಠವು, ಆರು ತಿಂಗಳೊಳಗೆ ಸಾಕ್ಷಿಗಳ ವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.

2016ರ ಜುಲೈ 28ರಂದು ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಶೆಟ್ಟಿ ಅವರ ಪುತ್ರ ನವನೀತ್ ಶೆಟ್ಟಿ ಸಹ ಬಂಧನಕ್ಕೆ ಒಳಗಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು