ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ 3 ವಿಜ್ಞಾನಿಗಳಿಗೆ ‘ಭಟ್ನಾಗರ್ ಪ್ರಶಸ್ತಿ’

Last Updated 26 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ದೇಶದ ಅತ್ಯುನ್ನತ ಪುರಸ್ಕಾರ, ‘ಶಾಂತಿ ಸ್ವರೂಪ್‌ ಭಟ್ನಾಗರ್ ಪ್ರಶಸ್ತಿ’ಗೆ ಬೆಂಗಳೂರಿನ ಮೂವರು ವಿಜ್ಞಾನಿಗಳು ಭಾಜನರಾಗಿದ್ದಾರೆ. ಈ ಸಾಲಿನಲ್ಲಿ ಒಟ್ಟು 12 ಜನರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಜವಾಹರಲಾಲ್ ನೆಹರೂ ಅಡ್ವಾನ್ಸ್ಡ್ ಸೈಂಟಿಫಿಕ್‌ ರಿಸರ್ಚ್‌ನ ತಪಸ್ ಕುಮಾರ್ ಮಜಿ, ಭಾರತೀಯ ವಿಜ್ಞಾನ ಸಂಸ್ಥೆಯ ಅನಿಂದಾ ಸಿನ್ಹಾ ಮತ್ತು ಮೈಕ್ರೊಸಾಫ್ಟ್‌ ರಿಸರ್ಚ್‌ ಇಂಡಿಯಾದ ಮಾಣಿಕ್ ವರ್ಮಾ ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಬೆಂಗಳೂರಿಗರು.

ಪ್ರಶಸ್ತಿ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (ಸಿಎಸ್‌ಐಆರ್) ಈ ಪ್ರಶಸ್ತಿಯನ್ನು ನೀಡುತ್ತದೆ.

ಪ್ರಶಸ್ತಿಯು ₹ 5 ಲಕ್ಷದ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT