ಸಚಿವರಿಂದ ಕಾಮಗಾರಿ ವಿಳಂಬ, ಆರೋಪ

ಹಗರಿಬೊಮ್ಮನಹಳ್ಳಿ: ‘ತಾಲ್ಲೂಕಿನ ಮಾಲವಿ ಜಲಾಶಯದ ಕಾಮಗಾರಿ ವಿಳಂಬಕ್ಕೆ ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ನೇರ ಕಾರಣ’ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್.ಬಿ.ಪಿ. ಭೀಮಾ ನಾಯ್ಕ ಗಂಭೀರ ಆರೋಪ ಮಾಡಿದರು.
ಇಲ್ಲಿನ ತಹಶಿಲ್ದಾರರ ಕಚೇರಿ ಎದುರು ಮಂಗಳವಾರ ರೈತರು ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಚಿವರು ಗುತ್ತಿಗೆದಾರರಿಂದ ಕಮಿಷನ್ ಕೇಳುತ್ತಿದ್ದಾರೆ. ವಿನಾಕಾರಣ ಕಾಮಗಾರಿಗೆ ವಿರೋಧಿಸುತ್ತಿದ್ದಾರೆ. ಜಾಕ್‌ವೆಲ್ ನಿರ್ಮಿಸಲು ಬಿಡುತ್ತಿಲ್ಲ‘ ಎಂದು ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.