ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ವಸತಿ ಗೃಹ ಹಂಚಿಕೆ ನೋಟಿಸ್‌ ಜಾರಿಗೆ ಆದೇಶ

Last Updated 11 ಜೂನ್ 2019, 19:19 IST
ಅಕ್ಷರ ಗಾತ್ರ

ಬೆಂಗಳೂರು: ಬೀದರ್ ನಗರದ ಜನವಾಡ ಪ್ರದೇಶದಲ್ಲಿ ಅಧಿಕಾರಿಗಳಿಗೆ ಮೀಸಲಿಟ್ಟ ವಸತಿ ಗೃಹದಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ ಅರಳಿಯವರಿಗೆ ಕಚೇರಿ ಹಂಚಿಕೆ ಮಾಡಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತು ‘ಭಾರತ್ ಸಂರಕ್ಷಣಾ ಸಮಿತಿ’ ಅಧ್ಯಕ್ಷ ಶಿವಶರಣಪ್ಪ ವಾಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ, ಕಂದಾಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ವಿಧಾನಮಂಡಳದ ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ, ವಿಧಾನಪರಿಷತ್ತಿನ ಕಾರ್ಯದರ್ಶಿ, ಬೀದರ್ ಜಿಲ್ಲಾಧಿಕಾರಿ ಸೇರಿದಂತೆ 9 ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

‘ಈ ಸಂಬಂಧ ಜೂನ್‌ 16ರ ಒಳಗೆ ಉತ್ತರಿಸಿ’ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಆಕ್ಷೇಪಣೆ ಏನು?: ‘ಅಧಿಕಾರಿಗಳ ವಸತಿ ಗೃಹದಲ್ಲಿ ಕಚೇರಿ ಹಂಚಿಕೆ ಮಾಡಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕು. ವಸತಿ ಗೃಹ ಪ್ರದೇಶವನ್ನು ಕಚೇರಿ ಉದ್ದೇಶಕ್ಕಾಗಿ ಹಂಚಿಕೆ ಮಾಡದಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT