ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ನಿಂದ ಹಲ್ಲೆಗೆ ಸದನದಲ್ಲಿ ಗದ್ದಲ: ಕಲಾಪ ನಾಳೆಗೆ

7

ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ನಿಂದ ಹಲ್ಲೆಗೆ ಸದನದಲ್ಲಿ ಗದ್ದಲ: ಕಲಾಪ ನಾಳೆಗೆ

Published:
Updated:

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಹಲ್ಲೆಯ ಕುರಿತು ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಸದನಲ್ಲಿ ಬೆಳಿಗ್ಗೆ ಆಡಿಯೊ ತನಿಖೆಯನ್ನು ಎಸ್‌ಐಟಿಗೆ ವಹಿಸುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು.

* ಇದನ್ನೂ ಓದಿ: ನನ್ನ ಕುಟುಂಬದವರ ಕೊಲೆಗೆ ಯತ್ನ: ಶಾಸಕ ಪ್ರೀತಂಗೌಡ ಗಂಭೀರ ಆರೋಪ

ಮಧ್ಯಾಹ್ನ ಸದನದ ಕಲಾಪ ಆರಂಭವಾದಾಗ ಬೆಳಿಗ್ಗೆ ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ನಡೆಸಿರುವ ವಿಷಯವನ್ನು ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಹರಿಹಾಯ್ದರು. 

ಮುಖ್ಯಮಂತ್ರಿ ಗೂಂಡಾಗಿರಿ ರಾಜಕೀಯ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಲು ನಿಂತರು. ಇದರಿಂದ ಸದನದಲ್ಲಿ ಗದ್ದಲ ಉಂಟಾಗಿ, ಯಾರ ಮಾತು ಯಾರಿಗೂ ಕೇಳದ ಸ್ಥಿತಿ ನಿರ್ಮಾಣವಾಯಿತು. 

ಗದ್ದಲ ಹೆಚ್ಚಾಗುತ್ತಿದ್ದಂತೆ ಸಭಾಧ್ಯಕ್ಷ ಕೆ.ಆರ್‌. ರಮೇಶ್‌ಕುಮಾರ್‌ ಅವರು ಕಲಾಪವನ್ನು ನಾಳೆಗೆ ಮುಂದೂಡಿದರು.

ಪರಿಷತ್ ಕಲಾಪ ಎರಡು ಬಾರಿ ಮುಂದೂಡಿಕೆ

ಪ್ರೀತಂಗೌಡ ಮನೆ ಮೇಲೆ ದಾಳಿ ವಿಷಯವನ್ನು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಪ್ರಸ್ತಾಪ ಮಾಡಿ ಗದ್ದಲ ಉಂಟಾಗಿದ್ದರಿಂದ ಎರಡು ಬಾರಿ ಕಲಾಪ ಮುಂದೂಡಲಾಗಿದೆ.

* ಇವನ್ನೂ ಓದಿ...

ಹಿಂದೆ ದಂಗೆಯ ಮಾತಾಡಿದ್ದರು, ಈಗ ದೇವೇಗೌಡರ ಕುಟುಂಬ ದೌರ್ಜನ್ಯ ಎಸಗಿದೆ: ಬಿಜೆಪಿ​

ಹಾಸನ: ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರಿಂದ ಕಲ್ಲು ತೂರಾಟ

ಬಿಜೆಪಿ ವಿರುದ್ಧ ದಂಗೆ ಏಳಲು ಜನರಿಗೆ ಹುಟ್ಟೂರಿನಿಂದಲೇ ಸಿಎಂ ಕುಮಾರಸ್ವಾಮಿ ಕರೆ

* ‘ದಂಗೆಗೆ ಕರೆ ಕೊಡುತ್ತೇವೆ’; ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !