ರಾಜ್ಯದಲ್ಲಿ 120 ಕ್ಷೇತ್ರ ಗೆಲ್ತೇವೆ ಎಂದ ಯಡಿಯೂರಪ್ಪ!

ಬುಧವಾರ, ಮಾರ್ಚ್ 20, 2019
23 °C

ರಾಜ್ಯದಲ್ಲಿ 120 ಕ್ಷೇತ್ರ ಗೆಲ್ತೇವೆ ಎಂದ ಯಡಿಯೂರಪ್ಪ!

Published:
Updated:
Prajavani

ತುಮಕೂರು: ರಾಜ್ಯದಲ್ಲಿ 120 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಇದಕ್ಕಾಗಿ ಎಲ್ಲ ರೀತಿಯ ಪ್ರಯತ್ನ ಪಕ್ಷ ಮಾಡುತ್ತಿದೆ!

ಇದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನಗರದಲ್ಲಿ ನೀಡಿದ ಹೇಳಿಕೆ!

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ನಗರದಲ್ಲಿ ಆಯೋಜಿಸಿದ್ಧ ಬೈಕ್ ರ್‍ಯಾಲಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಾತಿನ ಭರದಲ್ಲಿ ಯಡಿಯೂರಪ್ಪ ಅವರು ರಾಜ್ಯದಲ್ಲಿ 120 ಲೋಕಸಭಾ ಕ್ಷೇತ್ರ ಗೆಲ್ಲುವ ಮಾತಾಡಿಬಿಟ್ಟರು.

ಮತ್ತೆ ಹೇಳಿಕೆ ಮುಂದುವರಿಸಿ ಕನಿಷ್ಠ 22 ಸ್ಥಾನಗಳನ್ನು ಬಿಜೆಪಿ ಗೆಲ್ಲಬೇಕು. ದೇಶದಲ್ಲಿ 300 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದರು.

ಮುಂದಿನ ವಾರ ಟಿಕೆಟ್ ಫೈನಲ್: ಮುಂದಿನವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಅಂತಿಮಗೊಳಿಸಲಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !