7

ಲೋಕಸಭಾ ಚುನಾವಣೆ: ಅತಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಅಷ್ಟ ಸೂತ್ರ

Published:
Updated:

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಬಿಜೆಪಿ ವರಿಷ್ಠರು ಅಷ್ಟಸೂತ್ರಗಳನ್ನು ನೀಡಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ  ಈ ಸೂತ್ರ ಆಧರಿಸಿ ಗೆಲುವಿನ ಮುನ್ನುಡಿ ಬರೆಯುವ ಬಗ್ಗೆ ಚರ್ಚೆ ನಡೆಯಿತು.

ಸಮಿತಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ‘ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರು ಎಂಟು ಅಂಶಗಳ ಕಾರ್ಯಕ್ರಮ ಹಾಕಿಕೊಟ್ಟಿದ್ದಾರೆ. ಸಂಪರ್ಕ ಅಭಿಯಾನ, ಬೈಕ್ ರ‍್ಯಾಲಿ, ಹಿರಿಯ ನಾಗರಿಕ ಸಮಾವೇಶ, ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ, ಗ್ರಾಮ ಮಟ್ಟದಲ್ಲಿ ಅಭಿಯಾನ, ಮನೆಗೆ ಮನೆಗೆ ಭೇಟಿ ಮತ್ತಿತರ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಚರ್ಚೆ ನಡೆದಿದೆ. ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು’ ಎಂದು ವಿವರಿಸಿದರು.

ಎರಡು ನಿರ್ಣಯ: ಜನಾದೇಶ ಧಿಕ್ಕರಿಸಿ ಜೆಡಿಎಸ್‌–ಕಾಂಗ್ರೆಸ್‌ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿರುವ ಕುರಿತು, ಸರ್ಕಾರದ ವೈಫಲ್ಯದ ಬಗ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ಕುರಿತು ಎರಡು ನಿರ್ಣಯ ಮೇಲೆ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ. ಅದಾದ ಬಳಿಕ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಲಿಂಬಾವಳಿ ತಿಳಿಸಿದರು.

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಬರಲಿದ್ದಾರೆ. ಅನೇಕ ಸಮಾವೇಶಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಸಮಾವೇಶ ಯಶಸ್ವಿಗೊಳಿಸುವ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಅವರು ಹೇಳಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 3

  Amused
 • 1

  Sad
 • 2

  Frustrated
 • 2

  Angry

Comments:

0 comments

Write the first review for this !