ಗುರುವಾರ , ಏಪ್ರಿಲ್ 22, 2021
22 °C

ಸಂಖ್ಯೆ ಇದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ಮಂಡಿಸಲಿ: ಕೃಷ್ಣ ಬೈರೇಗೌಡ

ಪ್ರಜಾವಣಿ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಬಳಿ ಸಂಖ್ಯೆ ಇದ್ದರೆ ಸರ್ಕಾರ ಅವಿಶ್ವಾಸ ಮಂಡಿಸಲಿ. ಅದನ್ನು ಎದುರಿಸಲು ಸಿದ್ಧ ಎಂದು ಸಚಿವ ಕೃಷ್ಣಬೈರೇಗೌಡ ಅವರು ಕೇಸರಿ ಪಾಳಯಕ್ಕೆ ಸವಾಲೊಡ್ಡಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ಅಗಿದೆ. ಮುಖ್ಯಮಂತ್ರಿ ಇದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ವಿರೋಧ ಪಕ್ಷದ ಸವಾಲು ಎದುರಿಸಲು ಸಿದ್ಧರಿದ್ದೇವೆ. ಹಣಕಾಸು ಮಸೂದೆಯಲ್ಲಿ ಸರ್ಕಾರಕ್ಕೆ ಸೋಲಾದರೆ, ಆಗ ನೋಡೊಣ ಎಂದೂ ತಿಳಿಸಿದರು.

ತಮ್ಮ ಬಳಿ ಸಂಖ್ಯೆ ಇದೆ ಎಂದು ಹೇಳಿಕೊಳ್ಳು ಬಿಜೆಪಿ ಅದನ್ನು ಸಾಬೀತುಪಡಿಸಲಿ. ಅವಿಶ್ವಾಸ ಯಾವಾಗ ಕೈಗೆ ತೆಗೆದುಕೊಳ್ಳಬೇಕು ಎಂಬುದು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದೂ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು