ಕಣದಿಂದ ಹಿಂದೆ ಸರಿಯಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

7

ಕಣದಿಂದ ಹಿಂದೆ ಸರಿಯಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

Published:
Updated:
Deccan Herald

ಮಂಡ್ಯ: ‘ಎಬಿವಿಪಿ ಕಾರ್ಯಕರ್ತನಾಗಿದ್ದ ನಾನು ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿ ಅಭ್ಯರ್ಥಿಯಾಗಿದ್ದೇನೆ. ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಾಮನಗರ ಮಾದರಿಯಲ್ಲಿ ಮಂಡ್ಯ ಬಿಜೆಪಿ ಅಭ್ಯರ್ಥಿಯೂ ಕಣದಿಂದ ಹಿಂದೆ ಸರಿಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದರು.

‘ನಾನು ಯಾರಿಗೂ ಮಾರಾಟವಾಗುವುದಿಲ್ಲ. ಚುನಾವಣೆಯಲ್ಲಿ ಸೋತರೆ ಮನೆಗೆ ವಾಪಸ್‌ ತೆರಳುತ್ತೇನೆ. 30 ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಅಧಿಕಾರ ಅನುಭವಿಸಿದ್ದೇನೆ. ಈಗ ಜನಸೇವೆ ಮಾಡುವುದೇ ನನ್ನ ಗುರಿ. ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ಆರ್.ಅಶೋಕ್ ನೇತೃತ್ವದಲ್ಲಿ ಕ್ಷೇತ್ರದೆಲ್ಲೆಡೆ ಪ್ರಚಾರ ನಡೆಸಿದ್ದೇನೆ’ ಎಂದು ಹೇಳಿದರು.

‘ಬಿ.ಎಸ್.ಯಡಿಯೂರಪ್ಪ ಅವರ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೋವು ತಂದಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !