ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ ಪ್ರಚಾರ ವೇಳೆ ಮತದಾರರಿಗೆ ಋಣಮುಕ್ತ ಆಮಿಷ: ಬಿಜೆಪಿ ದೂರು

Last Updated 27 ಅಕ್ಟೋಬರ್ 2018, 17:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ವೇಳೆ ಮತದಾರರಿಗೆ ಆಮಿಷವೊಡ್ಡುವ ಆಶ್ವಾಸನೆಗಳನ್ನು ನೀಡದಂತೆ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದೆ.

‘ಉಪಚುನಾವಣೆ ಮುಗಿದ ನಂತರ ರೈತರಿಗೆ ಋಣಮುಕ್ತ ಪತ್ರ ನೀಡುವುದಾಗಿ ಕುಮಾರಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ. ಇದು ನೀತಿಸಂಹಿತೆ ಉಲ್ಲಂಘನೆಯಾಗಿರುವುದರಿಂದ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ರಾಜ್ಯ ಘಟಕದ ಸಹ ವಕ್ತಾರ ಎ.ಎಚ್.ಆನಂದ್ ಹಾಗೂ ಬಿಜೆಪಿ ಚುನಾವಣಾ ಆಯೋಗದ ಸಂಪರ್ಕ ವಿಭಾಗದ ಸಂಚಾಲಕ ದತ್ತಗುರು ಹೆಗಡೆ ಒತ್ತಾಯಿಸಿದರು.

‘ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಣೆ ಮಾಡಿ ತಿಂಗಳುಗಳು ಕಳೆದಿವೆ. ಯಾವುದೇ ಬ್ಯಾಂಕುಗಳಿಗೂ ಸರ್ಕಾರ ಹಣವನ್ನು ಪಾವತಿ ಮಾಡಿಲ್ಲ. ಈಗ ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT