ಸೋಮವಾರ, ಮಾರ್ಚ್ 30, 2020
19 °C

ಇದು 20 ಪರ್ಸೆಂಟ್‌ ಕಮಿಷನ್‌ ಸರ್ಕಾರ: ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಪ್ರಧಾನಿ ಮೋದಿ ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಶೇ 10 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶೇ 20 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಭ್ರಷ್ಟಾಚಾರ ಮಿತಿಮೀರಿದೆ. ಹಣ ನೀಡದೇ ಜನಸಾಮಾನ್ಯರ ಯಾವುದೇ ಕೆಲವೂ ಆಗುತ್ತಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು.

ನಗರದಲ್ಲಿ ಶನಿವಾರ ಆರಂಭವಾದ ಎರಡು ದಿನಗಳ ಬೆಳಗಾವಿ ವಿಭಾಗ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಜೆಡಿಎಸ್‌ ಮುಖಂಡರ ನಡೆಯ ಬಗ್ಗೆ ಹಲವು ವ್ಯಾಖ್ಯಾನಗಳು, ಟೀಕೆ, ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಪಕ್ಷ ಅಧಿಕಾರದಲ್ಲಿ ಇದ್ದಾಗ ನಿಷ್ಠಾವಂತ ಕಾರ್ಯಕರ್ತರು ಕಡೆಗಣನೆಗೆ ಒಳಗಾಗಿದ್ದಾರೆ. ಇದಕ್ಕೆ ಪಕ್ಷದ ವರಿಷ್ಠರು ಸ್ಪಷ್ಟನೆ ನೀಡಬೇಕು. ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಂಡು ಸಂಘಟನೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್‌: ‘ಜೆಡಿಎಸ್‌ ಅನ್ನು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

‘ನಾನು ರಾಜಕೀಯ ಪ್ರವೇಶಿಸಿ 59 ವರ್ಷವಾಯಿತು. ಅನೇಕ ಏಳುಬೀಳು ಕಂಡಿದ್ದೇನೆ. ಕೆಲವರು ನನ್ನನ್ನು ಜಾತಿವಾದಿ ಎಂದು, ಇನ್ನು ಕೆಲವರು ಜೆಡಿಎಸ್ ಹಳೇ ಮೈಸೂರಿಗೆ ಸೀಮಿತವಾದ ಪಕ್ಷ ಎಂದು ಬಿಂಬಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ವೈ.ಎಸ್‌.ವಿ.ದತ್ತ. ಎನ್‌.ಎಚ್‌.ಕೋನರಡ್ಡಿ, ತಿಪ್ಪೇಸ್ವಾಮಿ, ಎಂ.ಎಸ್‌.ಅಕ್ಕಿ ಇದ್ದರು.

'ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್‌’ 
‘ಜೆಡಿಎಸ್‌ ಅನ್ನು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

‘ಕೆಲವರು ನನ್ನನ್ನು ಜಾತಿವಾದಿ ಎಂದು, ಇನ್ನು ಕೆಲವರು ಜೆಡಿಎಸ್ ಹಳೇ ಮೈಸೂರಿಗೆ ಸೀಮಿತವಾದ ಪಕ್ಷ ಎಂದು ಬಿಂಬಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು