ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ ಗಾಂಧಿ ಕುರಿತು ವಿವಾದಾತ್ಮಕ ಟ್ವೀಟ್‌: ಕ್ಷಮೆಯಾಚಿಸಿದ ಸಂಸದ ನಳಿನ್‌

Last Updated 17 ಮೇ 2019, 7:07 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಕುರಿತು ವಿವಾದಾತ್ಮಕ ಟ್ವೀಟ್‌ ಮಾಡಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಇದೀಗ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

’ಗೋಡ್ಸೆ ಒಬ್ಬರನ್ನು ಕೊಂದ, ಕಸಬ್‌ ಕೊಂದಿದ್ದು 72 ಜನರನ್ನು, ರಾಜೀವ್‌ ಗಾಂಧಿ 17,000 ಜನರ ಸಾವಿಗೆ ಕಾರಣರಾದರು. ಇವರಲ್ಲಿ ಯಾರು ಹೆಚ್ಚು ಕ್ರೂರರೆಂದು ನೀವೇ ನಿರ್ಣಯಿಸಿ’ ಎಂದು ನಳಿನ್‌ ಕುಮಾರ್ ಕಟೀಲ್‌ ಗುರುವಾರ ಟ್ವೀಟ್‌ ಮಾಡಿದ್ದರು.

ನಳಿನ್‌ ಕುಮಾರ್‌ ಮಾಡಿದ್ದ ಟ್ವೀಟ್‌ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು.

ವಿವಾದ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆ ಮತ್ತೊಂದು ಟ್ವೀಟ್‌ ಮಾಡಿರುವ ನಳಿನ್, ‘ನನ್ನ ಕೊನೆಯ ಎರಡು ಟ್ವೀಟ್‌ಗಳಿಗೆ ಟೀಕೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ. ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನೋವಾಗಿದೆಯೆಂದು ತಿಳಿದ ತಕ್ಷಣ ಟ್ವೀಟ್ ಹಿಂಪಡೆದಿದ್ದೇನೆ. ಚರ್ಚೆ ಇಲ್ಲಿಗೆ ಮುಗಿಸೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT