ಬಿಜೆಪಿ ಮುಖಂಡರ ಆಕ್ರೋಶ

7

ಬಿಜೆಪಿ ಮುಖಂಡರ ಆಕ್ರೋಶ

Published:
Updated:
Deccan Herald

ಮಡಿಕೇರಿ: ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದರೂ ಮಡಿಕೇರಿಯಲ್ಲಿ ಸಭೆ ನಡೆಸದೇ ತೆರಳಿದ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದ ಪ್ರತಾಪ್‌ ಸಿಂಹ, ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುನಿಲ್‌ ಸುಬ್ರಮಣಿ ಅವರು ಕಾದು ಕುಳಿತಿದ್ದರು. ಆದರೆ, ಜಿಲ್ಲಾಧಿಕಾರಿ ಕಚೇರಿಗೆ ಮುಖ್ಯಮಂತ್ರಿ ಬರಲಿಲ್ಲ.

‘ಜನರ ಸಂಕಷ್ಟಕ್ಕೆ ಮುಖ್ಯಮಂತ್ರಿ ಸ್ಪಂದಿಸಬೇಕಿತ್ತು. ₹100 ಕೋಟಿ ಪ್ಯಾಕೇಜ್‌ ಘೋಷಣೆ ಮಾಡಿದ್ದರೂ ಹಣ ಬಿಡುಗಡೆ ಮಾಡಿಲ್ಲ. ಮಧ್ಯಾಹ್ನ 12ರಿಂದಲೂ ಅವರಿಗಾಗಿ ಕಾಯುತ್ತಿದ್ದೆವು. ಸಂಕಷ್ಟದ ಸ್ಥಿತಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯದೆ ತೆರಳಿರುವುದನ್ನು ಖಂಡಿಸುತ್ತೇನೆ. ಕುಮಾರಸ್ವಾಮಿ ಅವರ ಬಗ್ಗೆ ಗೌರವವಿತ್ತು. ನಿಜವಾದ ಬಣ್ಣ ಬಯಲಾಗಿದೆ’ ಎಂದು ಬೋಪಯ್ಯ ದೂರಿದರು.

‘ಪುನರ್ವಸತಿಗೆ ಸ್ಥಳಗಳನ್ನು ಹುಡುಕಬೇಕಿದೆ. ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದೇನೆ. ಕೇಂದ್ರ ಸರ್ಕಾರವೂ ಅಗತ್ಯ ಸಹಕಾರ ನೀಡಲಿದೆ’ ಎಂದು ಸದಾನಂದಗೌಡ ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 2

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !