ಶನಿವಾರ, ಡಿಸೆಂಬರ್ 14, 2019
24 °C

ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ನಾಯಕರು ವಿಫಲ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಯಾವುದೇ ಪ್ರಯತ್ನ ಮಾಡದ, ಕೇಂದ್ರ ಸರ್ಕಾರದಿಂದ ಗೆಜೆಟ್ ನೋಟಿಪಿಕೇಶನ್ ಹೊರಡಿಸಲು ವಿಫಲವಾಗಿರುವ ಮುಂಬೈ ಕರ್ನಾಟಕ ಭಾಗದ ಕೇಂದ್ರ ಮತ್ತು ರಾಜ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. 

ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಚಿವ ಡಿಕೆಶಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು 200 ಕೆ.ಜಿ. ತೂಕದ 40 ಅಡಿ ಉದ್ದನೆಯ ಸೇಬು ಹಣ್ಣಿನ ಬೃಹತ್ ಹಾರ ಹಾಕಿ, ಆರತಿ ಬೆಳಗಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿದರು

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು