ಬಿಜೆಪಿಯ ಮಹತ್ವದ ಸಭೆ ಇಂದು: ಶಾಸಕರ ಹಿಡಿದಿಟ್ಟುಕೊಳ್ಳಲು ತಂತ್ರ

7

ಬಿಜೆಪಿಯ ಮಹತ್ವದ ಸಭೆ ಇಂದು: ಶಾಸಕರ ಹಿಡಿದಿಟ್ಟುಕೊಳ್ಳಲು ತಂತ್ರ

Published:
Updated:

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಹಾಗೂ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸುವ ಸಲುವಾಗಿ ಬಿಜೆಪಿಯ ಸರಣಿ ಸಭೆ ಮಂಗಳವಾರ ನಡೆಯಲಿದೆ.

ಪಕ್ಷದ ರಾಜ್ಯ ಕಾರ್ಯಕಾರಿಣಿ, ಪ್ರಮುಖರ ಸಭೆ ಹಾಗೂ ಶಾಸಕಾಂಗ ಪಕ್ಷದ ಸಭೆಗಳು ನಡೆಯಲಿವೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿವಿಧ ಸಭೆಗಳು ನಡೆಯಲಿದ್ದು, ಪದಾಧಿಕಾರಿಗಳು, ಶಾಸಕರು, ಸಂಸದರು ಹಾಜರಾಗುವಂತೆ ಸೂಚಿಸಲಾಗಿದೆ.

‘ಆಪರೇಷನ್’ ಭಯ: ತಮ್ಮ ಪಕ್ಷದ ಕೆಲವು ಶಾಸಕರು ಜೆಡಿಎಸ್–ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಶಂಕೆ ನಾಯಕರಿಗೆ ಮೂಡಿದೆ. ಆಪರೇಷನ್ ಕಮಲಕ್ಕೆಪ್ರತಿ ‘ಆಪರೇಷನ್’ ಮಾಡಲು ಮೈತ್ರಿ ಪಕ್ಷಗಳ ನಾಯಕರು ಕಾರ್ಯತಂತ್ರ ಹೆಣೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆಯೂ ಸಭೆಯಲ್ಲಿಚರ್ಚೆ ನಡೆಯಲಿದೆ ಎನ್ನಲಾಗಿದೆ.

‘ಆಪರೇಷನ್ ಕೈ–ದಳ’ದ ಭೀತಿ ತೀವ್ರವಾದರೆ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !