ಭಾನುವಾರ, ಜನವರಿ 19, 2020
29 °C

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅಪ್ಪಚ್ಚು ರಂಜನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಐದು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಇಲ್ಲಿ ಮಂಗಳವಾರ ಹೇಳಿದರು.

‘ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷ ಹೇಳಿತ್ತು. ಅದರಂತೆ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಉಳಿದ ಸ್ಥಾನಗಳಿಗೆ ನಾನೂ ಆಕಾಂಕ್ಷಿ. ಹಿಂದೆ ಸಚಿವ ಸ್ಥಾನ ಕೈತಪ್ಪಿತ್ತು. ಈಗ ಅವಕಾಶ ಸಿಗುವ ನಿರೀಕ್ಷೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಪಠ್ಯದಲ್ಲಿ ಟಿಪ್ಪು– ಹೊಗಳಿಕೆ ಬೇಡ

‘ಟಿಪ್ಪು ವಿಷಯವನ್ನು ಪಠ್ಯದಲ್ಲಿ ಉಳಿಸಿಕೊಳ್ಳುವುದಿದ್ದರೆ ಆತನ ಕ್ರೌರ್ಯವನ್ನು ಉಳಿಸಿಕೊಳ್ಳಬೇಕು. ಇಂದ್ರ, ಚಂದ್ರ ಎಂದು ಹೊಗಳಿರುವ ವಿಷಯ ಬೇಡ. ತಜ್ಞರ ವರದಿ ನನಗೆ ಸಿಕ್ಕಿಲ್ಲ. ಆ ವರದಿಯನ್ನೂ ನನಗೂ ನೀಡಬೇಕು. ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು