ಭಾನುವಾರ, ಏಪ್ರಿಲ್ 5, 2020
19 °C
ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಟೀಕೆ

ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ: ಬಸನಗೌಡ ಪಾಟೀಲ ಯತ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು/ವಿಜಯಪುರ: ಗಾಂಧೀಜಿ ಅವರ ಒಡನಾಡಿಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್‌. ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ, ಆತ ಪಾಕಿಸ್ತಾನದ ಏಜೆಂಟ್‌’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿರುವುದು ಖಂಡನೆಗೆ ಗುರಿಯಾಗಿದೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ, ‘ಸ್ವಾತಂತ್ರ್ಯಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಹೋರಾಟ ಮಾಡಿದ್ದಾರೆ. ಆದರೆ, ಅವರ ತತ್ವ, ಸಿದ್ಧಾಂತಗಳು ಬೇರೆ ಆಗಿದ್ದವು. ದೊರೆಸ್ವಾಮಿ ನಕಲಿ ಹೋರಾಟಗಾರ’ ಎಂದು ಹೇಳಿದ್ದಾರೆ.

‘ಪಾಕಿಸ್ತಾನ ನಮಗೆ ಬಚ್ಚಾ, ನಾವೇ ಅದರ ತಂದೆ. ಪಾಕಿಸ್ತಾನ ಹುಟ್ಟಿದ್ದೇ ನಮ್ಮಿಂದ. ಜವಾಹರಲಾಲ್ ನೆಹರೂ ಅವರ ಸ್ವಾರ್ಥದಿಂದ ಪಾಕಿಸ್ತಾನ ಹುಟ್ಟಿದೆ’ ಎಂದು ಹೇಳಿದರು.

‘ದೊರೆಸ್ವಾಮಿ ವಿರುದ್ಧ ಅತ್ಯಂತ ಕೀಳಾಗಿ ಮಾತನಾಡಿರುವ ಯತ್ನಾಳ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮಕೈಗೊಂಡು ಬಾಯಿ ಮುಚ್ಚಿಸಬೇಕು. ಇಲ್ಲ ಅದು ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿ ಯತ್ನಾಳ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಚೋದ್ಯ
 

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

***

ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಾಲಿಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ 

-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು