ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕರ ಸಭೆ: ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅಸಮಾಧಾನ

Last Updated 31 ಮೇ 2020, 10:03 IST
ಅಕ್ಷರ ಗಾತ್ರ

ಮೈಸೂರು: ‘ಕೆಲವರಿಗೆ ಸಣ್ಣಪುಟ್ಟ ಅಪೇಕ್ಷೆಗಳು ಇರುತ್ತವೆ. ಅವುಗಳನ್ನು ಕೇಳುವ ರೀತಿ ಸರಿಯಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ತಮ್ಮದೇ ಪಕ್ಷದ ಕೆಲವು ಶಾಸಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

‘ಅವರವರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಜತೆ ಮಾತನಾಡಬೇಕಿತ್ತು. ಅದರ ಬದಲು ಸಭೆ ನಡೆಸಿದ್ದು ಸರಿಯಲ್ಲ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಪಕ್ಷದ ವರಿಷ್ಠರು ಈ ಬಗ್ಗೆ ಮಾತನಾಡಿ ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತಾರೆ’ ಎಂದು ಭಾನುವಾರ ಇಲ್ಲಿ ಮಾಧ್ಯಮದವರಲ್ಲಿ ತಿಳಿಸಿದರು.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಆಂತರಿಕ ಕಚ್ಚಾಟ ಏನು ಎಂಬುದು ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ ಎಂಬುದೂ ಅವರಿಗೆ ಗೊತ್ತು’ ಎಂದು ತಿರುಗೇಟು ನೀಡಿದರು.

‘ಆಂತರಿಕ ಕಿತ್ತಾಟಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಲಕ್ಷ್ಮಣ ರೇಖೆ ದಾಟುವವರು ನಮ್ಮ ಪಕ್ಷದಲ್ಲಿ ಯಾರೂ ಇಲ್ಲ. ಬೇರೆ ಪಕ್ಷದಲ್ಲಿ ಇದ್ದಾರೋ ಗೊತ್ತಿಲ್ಲ. ಸರ್ಕಾರವನ್ನು ಏನೂ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಇನ್ನುಳಿದ ಅವಧಿಗೆ ಸರ್ಕಾರ ಸುಭದ್ರವಾಗಿರುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT