ಭಾನುವಾರ, ಮಾರ್ಚ್ 29, 2020
19 °C

ಸಂಸದ ಅನಂತಕುಮಾರ್‌ ಹೆಗಡೆ ಖುಲಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Ananth Kumar Hegde

ಬೆಂಗಳೂರು: ‘ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತೆ ಭಾಷಣ ಮಾಡಿದ ಆರೋಪದಿಂದ ಸಂಸದ ಅನಂತ ಕುಮಾರ ಹೆಗಡೆ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಖುಲಾಸೆಗೊಳಿಸಿದೆ.

ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸಿದ್ದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ಅವರು ಅನಂತಕುಮಾರ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯ ಆಧಾರದಲ್ಲಿ ಆರೋಪಮುಕ್ತಗೊಳಿಸಿದ್ದಾರೆ.

ಪ್ರಕರಣವೇನು?: ‘2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಅನಂತ ಕುಮಾರ್ ಅವರು ಶಿರಸಿಯ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ವೇಳೆ ಪ್ರಚೋದನಕಾರಿ ಅಂಶಗಳನ್ನು ಪ್ರಸ್ತಾಪಿಸಿದ್ದರು’ ಎಂದು ಆರೋಪಿಸಿದ ಪ್ರಕರಣ ಇದಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು