ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಮರಣ ಶಾಸನ: ಮುರಳೀದರ ರಾವ್‌ ಆರೋಪ

ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ
Last Updated 16 ಏಪ್ರಿಲ್ 2019, 17:47 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರ ಫೆಬ್ರುವರಿ ಅಧಿವೇಶನದಲ್ಲಿ ಚರ್ಚಿಸದೆ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಇದು ರೈತರ ಪಾಲಿಗೆ ಬರೆದ ಮರಣಶಾಸನ ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ.ಮುರಳೀಧರ ರಾವ್‌ ದೂರಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ತಿದ್ದುಪಡಿಯಂತೆ ಸರ್ಕಾರಿ ಯೋಜನೆಗಳಿಗೆ ಮಾತ್ರವಲ್ಲದೆ, ಸರ್ಕಾರಿ–ಖಾಸಗಿ ಸಹಭಾಗಿತ್ವದ ಯೋಜನೆಗಳಿಗೂ ರೈತರ ಫಲವತ್ತಾದ ಜಮೀನು ವಶಪಡಿಸಿಕೊಳ್ಳಬಹುದಾಗಿದೆ. ಈ ತಿದ್ದುಪಡಿಯಿಂದ ರೈತರಿಗೆ ಸಿಗುವ ಪರಿಹಾರದಲ್ಲಿ ಶೇ 400ರಷ್ಟು ಕಡಿಮೆಯಾಗಲಿದೆ’ ಎಂದರು.

‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಜನರ ವಿಶ್ವಾಸ ಹಾಗೂ ನಂಬಿಕೆ ಗಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದ ಬಿಜೆಪಿಗೆ ಅನುಕೂಲವಾಗಲಿದೆ. ತುಮಕೂರಿನಲ್ಲಿ ಎಚ್‌.ಡಿ.ದೇವೇಗೌಡ ಹಾಗೂ ಗುಲ್ಬರ್ಗಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಸೋಲಲಿದ್ದಾರೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಇದೇ 18ರಂದು ವಿಜಯಪುರ ಹಾಗೂ ಚಿಕ್ಕೋಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ ಜಿ.ಜೆ.ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT