ಕಲ್ಲು ತೂರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ: ಯಡಿಯೂರಪ್ಪ ಆರೋಪ

7

ಕಲ್ಲು ತೂರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ: ಯಡಿಯೂರಪ್ಪ ಆರೋಪ

Published:
Updated:

ಬೆಂಗಳೂರು: ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಪ್ರಕರಣದಲ್ಲಿ  ಮುಖ್ಯಮಂತ್ರಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. 

ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ, ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಸೆಕ್ಷನ್‌ ಹಾಕದಂತೆ ಒತ್ತಡ ಹೇರಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

‘ನಿನ್ನೆ ರಾತ್ರಿ ನಮ್ಮ 15 ಶಾಸಕರೊಂದಿಗೆ ಪ್ರೀತಂಗೌಡ ಮನೆಗೆ ಭೇಟಿ ನೀಡಿದ್ದೆ. ಘಟನೆ ಕುರಿತು ಮಾಹಿತಿ ಪಡೆದಿದ್ದಾನೆ. ಜತೆಗೆ, ಗಾಯಗೊಂಡಿರುವ ಯುವಕನನ್ನು ಇಂದು ಮಲ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ’ ಎಂದರು.

ಪ್ರಕರಣ ಕುರಿತು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲು ನಿರ್ಧರಿಸಿರುವ ಬಿಜೆಪಿ ನಾಯಕರು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ಹೊರಟಿದ್ದರು. 

ಪಾದಯಾತ್ರೆಯಲ್ಲಿ ಕೆ.ಎಸ್‌.ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ‘ನಮ್ಮ ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ.‌ ಇದನ್ನು ಖಂಡಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ. ಜತೆಗೆ, ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಪ್ರಕರಣದ ಮಾಹಿತಿ‌ ನೀಡಲಾಗಿದೆ’ ಎಂದು ತಿಳಿಸಿದರು.

‘ವರದಿ ತರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ರಾಜ್ಯಪಾಲರು ನೀಡಿದ್ದಾರೆ’ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. 

ಇವನ್ನೂ ಓದಿ...

‘ದೇವೇಗೌಡ್ರು ವಿಕೆಟ್‌ ಹೋಗ್ತದೆ ಕುಮಾರಣ್ಣಂದು ಹೆಲ್ತ್‌ ಇಲ್ಲ’

ನನ್ನ ಕುಟುಂಬದವರ ಕೊಲೆಗೆ ಯತ್ನ: ಶಾಸಕ ಪ್ರೀತಂಗೌಡ ಗಂಭೀರ ಆರೋಪ

ಹಾಸನ: ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರಿಂದ ಕಲ್ಲು ತೂರಾಟ

ಬಿಜೆಪಿ ವಿರುದ್ಧ ದಂಗೆ ಏಳಲು ಜನರಿಗೆ ಹುಟ್ಟೂರಿನಿಂದಲೇ ಸಿಎಂ ಕುಮಾರಸ್ವಾಮಿ ಕರೆ

‘ದಂಗೆಗೆ ಕರೆ ಕೊಡುತ್ತೇವೆ’; ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !