ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಪಂ ಚುನಾವಣೆಗೆ ಬಿಜೆಪಿ ಸಿದ್ಧ: ಸಚಿವ ಈಶ್ವರಪ್ಪ

Last Updated 4 ಜೂನ್ 2020, 6:29 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ‌ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲೆಯ ವಿವಿಧ ಕಡೆ ಉದ್ಯೋಗ ಖಾತರಿ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಜೂನ್‌ನಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದು, ಚುನಾವಣೆ ನಡೆಸಬಹುದು ಎಂದು ಚುನಾವಣೆ ಆಯೋಗಕ್ಕೆ ಕೇಳಿಕೊಳ್ಳಲಾಗಿತ್ತು. ಆದರೆ, ಚುನಾವಣೆ ಆಯೋಗವು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ, ಈಗ ಚುನಾವಣೆ ನಡೆಸುವುದಿಲ್ಲ ಎಂದು ಹೇಳಿದೆ. ಆಯೋಗ ನಿರ್ಧಾರದ ವಿರುದ್ಧ ಸರ್ಕಾರ ಹೋಗುವುದಿಲ್ಲ ಎಂದು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆಯ ಎಲ್ಲ ಬಾಕಿಗಳು ಚುಕ್ತಾ ಆಗಿದ್ದು, ಉದ್ಯೋಗ ಮಾಡುವ ಪ್ರತಿಯೊಬ್ಬ ಕಾರ್ಮಿಕರಿಗೂ 15 ದಿನಗಳಲ್ಲಿ ‌ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ‌ ನೌಕರರು ಹಾಗೂ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಯಾರೇ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೂ ಉದ್ಯೋಗ ನೀಡಲಾಗುವುದು ಎಂದು ಹೇಳಿದರು.
ಸದ್ಯ ರಾಜ್ಯದಲ್ಲಿ ಒಂದು ಸಾವಿರ ಕೋಟಿ ಖಾತೆಯಲ್ಲಿದೆ. ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ದಿನಕ್ಕೆ ಒಂದು ಲಕ್ಷ ಜನರಿಗೆ ಉದ್ಯೋಗ ಸಿಗುತ್ತಿದೆ. ಜನಸಾಮಾನ್ಯರಿಗೆ ಇದರಿಂದ ಅನುಕೂಲವಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT