ಮಂಗಳವಾರ, ಏಪ್ರಿಲ್ 7, 2020
19 °C

ಬಿಜೆಪಿ ಅತೃಪ್ತರು ಮುಂದಿನ ವಾರ ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಕಾರಣಗಳಿಗೆ ಮುನಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟದ ಕೆಲವು ಸಚಿವರು ಮತ್ತು ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಸಿಟ್ಟಾಗಿರುವ ಶಾಸಕರು ಒಟ್ಟಾಗಿ ಮುಂದಿನ ವಾರ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ.

ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳ ನೇಮಕವೂ ಸೇರಿ ಹಲವು ಬೇಡಿಕೆಗಳನ್ನು ವರಿಷ್ಠರ ಮುಂದಿಡಲಿದ್ದಾರೆ. ಹಿರಿಯ ಶಾಸಕ ಉಮೇಶ ಕತ್ತಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಈ ನಿಯೋಗ ತೆರಳಲಿದ್ದು, ಕೆಲವು ಹಿರಿಯ ಸಚಿವರೂ ಇರಲಿದ್ದಾರೆ ಎಂದು ಮೂಲಗಳು ಹೇಳಿವೆ.

ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವುದರ ಜತೆಗೆ ಪಕ್ಷದ ಮೂಲ ಶಾಸಕರಿಗೆ ಆದ್ಯತೆ ನೀಡಬೇಕು ಎಂದು ಶಾಸಕರು ಒತ್ತಾಯಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು