ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ–ಸಿದ್ದರಾಮಯ್ಯ

Last Updated 9 ಮಾರ್ಚ್ 2020, 6:49 IST
ಅಕ್ಷರ ಗಾತ್ರ

ಬೆಂಗಳೂರು:ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿರಾಜ್ಯ ರಾಜಕಾರಣ ಪಡಸಾಲೆಯಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಕೆಲವು ಸಚಿವರು ಸಿದ್ಧರಾಮಯ್ಯ ಬಿಜೆಪಿ ಸೇರಿದರೂ ಸೇರಬಹದು ಎಂದಿದ್ದರು.

ಈ ವದಂತಿಗಳಿಗೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ,ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.

ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಬಿಜೆಪಿಗೆ ವಲಸೆ ಹೋಗಿರುವವರಿಗೆ ಟಾಂಗ್‌ ಕೊಟ್ಟಿದ್ದಾರೆ.

ಬಾದಾಮಿ ಕ್ಷೇತ್ರದ ಬಗ್ಗೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ ‘ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT