ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪ ಬಂದಾಗ ಹೋರಾಟ ನಡೆಸುವುದಲ್ಲ, ಎದುರಿಸಬೇಕು : ಸಂಸದ ನಳಿನ್‌

Last Updated 15 ಸೆಪ್ಟೆಂಬರ್ 2019, 19:45 IST
ಅಕ್ಷರ ಗಾತ್ರ

ಮೂಡುಬಿದಿರೆ: ‘ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿ ನಿಂತು ಹೋರಾಟ ಮಾಡುವುದಲ್ಲ'ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಪಕ್ಷದ ಪ್ರಭಾವಿ ಶಾಸಕ ಡಿ.ಕೆ. ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಪ್ರತಿಭಟನೆಗಳ ಬಗ್ಗೆ ಅವರು ಪರೋಕ್ಷವಾಗಿ ಪ್ರತಿಕ್ರಿಯಿಸಿದರು. ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಒಳ್ಳೆಯ ಪರಿಹಾರ ನೀಡಲಿದೆ’ ಎಂದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾನುವಾರ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿದ ಅವರು ಪಕ್ಷದ ಕಚೇರಿಗೆ ತೆರಳಿ ಪ್ರಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಳಿನ್ ಕುಮಾರ್ ಕಟೀಲ್ ಅವರನ್ನು ಹಳೆ ಪೋಲೀಸ್ ಠಾಣೆಯ ಬಳಿ ಪಕ್ಷದ ಕಾರ್ಯಕರ್ತರು ಸ್ವಾಗತಿಸಿದರು.

ಸಂಸದ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಎರಡೂ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆಯನ್ನು ಬಲಪಡಿಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಪ್ರಧಾನ ಕಾರ್ಯದರ್ಶಿಸುದರ್ಶನ ಎಂ., ಬಿಜೆಪಿ ಜಿಲ್ಲಾ ವಕ್ತಾರ ಕೃಷ್ಣರಾಜ ಹೆಗ್ಡೆ, ಪುರಸಭೆ ಸದಸ್ಯರಾದ ನಾಗರಾಜ ಪೂಜಾರಿ, ಪ್ರಸಾದ್, ರಾಜೇಶ್ ನಾಯ್ಕ್, ಶ್ವೇತಾ ಕುಮಾರಿ, ಸ್ವಾತಿ ಪ್ರಭು, ಮಾಜಿ ಸದಸ್ಯರಾದ ಬಾಹುಬಲಿ ಪ್ರಸಾದ್, ಲಕ್ಷ್ಮಣ್ ಪೂಜಾರಿ, ಪುತ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗವರ್ಮ ಜೈನ್, ಶಶಿಧರ ಅಂಚನ್, ಬೆಳುವಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ ಆಚಾರ್ಯ, ಬಿಜೆಪಿ ಮುಖಂಡರಾದ ಮೇಘನಾಥ ಶೆಟ್ಟಿ, ಶಾಂತಿ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT