ಕಲ್ಲು ತೂರಾಟ ಪ್ರಕರಣ: ಜೆಡಿಎಸ್ ಕಾರ್ಯಕರ್ತರ ಬಂಧನಕ್ಕೆ ಬಿಜೆಪಿ ಆಗ್ರಹ

7

ಕಲ್ಲು ತೂರಾಟ ಪ್ರಕರಣ: ಜೆಡಿಎಸ್ ಕಾರ್ಯಕರ್ತರ ಬಂಧನಕ್ಕೆ ಬಿಜೆಪಿ ಆಗ್ರಹ

Published:
Updated:

ಹಾಸನ: ಶಾಸಕ ಪ್ರೀತಂ ಜೆ.ಗೌಡ ಮನೆಗೆ ಮುತ್ತಿಗೆ ಹಾಕಿದ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಜೆಡಿಎಸ್ ವಿರುದ್ಧ ಘೋಷಣೆ ಕೂಗಿದರು. ಎನ್.ಆರ್.ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಯೋಗಾರಮೇಶ್, ಮುಖಂಡರಾದ ನವಲೆ ಅಣ್ಣಪ್ಪ, ರೇಣುಕುಮಾರ್, ವೇಣುಗೋಪಾಲ್, ನಾಗೇಶ್, ಶೋಬನ್ ಬಾಬು, ಹುಲ್ಲಳ್ಳಿ ಸುರೇಶ್ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !