ನಾಳೆಯಿಂದ ಬಿಜೆಪಿ ತಂಡಗಳು ಪ್ರವಾಸ

7

ನಾಳೆಯಿಂದ ಬಿಜೆಪಿ ತಂಡಗಳು ಪ್ರವಾಸ

Published:
Updated:

ಬೆಂಗಳೂರು: ಸ್ಥಳೀಯ ಸಂಸ್ಥೆ ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಲು ಬಿಜೆಪಿ ರಾಜ್ಯ ಘಟಕದ ಮೂರು ತಂಡಗಳು ಇದೇ 9ರಿಂದ 16ರ ವರೆಗೆ ರಾಜ್ಯ ಪ್ರವಾಸ ಮಾಡಲಿವೆ.

‘ಪ್ರವಾಸದ ವೇಳೆ ಜಿಲ್ಲಾ ಪ್ರಮುಖರ ಸಭೆ ನಡೆಸಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಬೂತ್‌ ಬಲಪಡಿಸುವ ಕುರಿತು ಚರ್ಚೆ ನಡೆಸಲಾಗುತ್ತದೆ. ಶಕ್ತಿ ಕೇಂದ್ರದ ಪ್ರಮುಖರ ಜತೆಗೆ ಸಮಾಲೋಚನೆ ನಡೆಸಲಾಗುತ್ತದೆ’ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ವೇತಪತ್ರಕ್ಕೆ ಆಗ್ರಹ: ‘ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ತೆರೆಮರೆಯಲ್ಲಿ ಹುನ್ನಾರ ನಡೆಸಿ 28 ಸಾವಿರ ಶಾಲೆಗಳ ಮುಚ್ಚಲು ಮುಂದಾಗಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಕನ್ನಡಕ್ಕೆ ದೊಡ್ಡ ಆಘಾತ ಉಂಟು ಮಾಡಲು ಸರ್ಕಾರ ಹೊರಟಿದೆ. ಶಾಲೆಗಳ ಶಿಕ್ಷಣದ ಸ್ಥಿತಿ ಹಾಗೂ ಮೂಲಸೌಕರ್ಯದ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಆಗ್ರಹಿಸಿದರು.

‘ಪದವಿಪೂರ್ವ ಕಾಲೇಜುಗಳಲ್ಲಿ ಮೂಲಸೌಕರ್ಯಗಳಿಲ್ಲ. 30 ಸಾವಿರಕ್ಕೂ ಅಧಿಕ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗಳ ಖಾಲಿ ಇವೆ. ಇವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !