ರಾಹುಲ್‌ ಕಾಲೆಳೆದ ಬಿಜೆಪಿ

ಬುಧವಾರ, ಜೂನ್ 26, 2019
23 °C

ರಾಹುಲ್‌ ಕಾಲೆಳೆದ ಬಿಜೆಪಿ

Published:
Updated:

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ರಾಹುಲ್ ಗಾಂಧಿ ಅವರು ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕರ್ನಾಟಕ, ‘ನಿಮ್ಮ ಮುಖ್ಯಮಂತ್ರಿ’ ಎಚ್.ಡಿ. ಕುಮಾರಸ್ವಾಮಿ ಅದೇ ಕೆಲಸವನ್ನು ಕರ್ನಾಟಕದಲ್ಲೂ ಮಾಡುತ್ತಿಲ್ಲವೇ? ಎಂದು ಕಾಲೆಳೆದಿದೆ.

‘ನಿಮ್ಮ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ರಕರ್ತರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿ, ನಿಂದನೆ ಮಾಡುತ್ತಿದ್ದಾರೆ.  ಟಿಪ್ಪುವಿನ ದೌರ್ಜನ್ಯದ ಕುರಿತು ಮಾತನಾಡಿದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಲಾಗಿತ್ತು. ಮುಖ್ಯಮಂತ್ರಿ ಪುತ್ರನ ನಡವಳಿಕೆ ಬಗ್ಗೆ ವರದಿ ಮಾಡಿದ್ದಕ್ಕೆ ವಿಶ್ವೇಶ್ವರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದು ನಿಮ್ಮ ಆಷಾಢಭೂತಿತನವನ್ನು ತೋರಿಸುತ್ತದೆ’ ಎಂದು ಬಿಜೆಪಿ ಕರ್ನಾಟಕ ಘಟಕ ಟ್ವೀಟ್‌ ಮಾಡಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !